ಕೃಷಿ

ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ :  ಕಡಬ ತಾಲೂಕು ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿದ್ಯಾಲಯದ ವಿದ್ಯಾಥರ್ಿಗಳು ಕಡಬದ ನಾರಾಯಣ ಗೌಡ ಸಂಕೇಶ  ಗದ್ದೆಯಲ್ಲಿ  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.
ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಕೃಷಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಪದ್ದತಿ ನಮ್ಮ ಹಿರಿಯ ಬಳುವಳಿ. ಇದನ್ನು ಮುಂದುವರಿಸಿವುದು ನಮ್ಮೆಲ್ಲರ ಕರ್ತವ್ಯ.  ಜೀವನದಲ್ಲಿ ಸ್ವಾವಲಂಬಿಯಾಗಿ ಬದುಕಲು ಕೃಷಿ ಸಹಕಾರಿಯಾಗಿದೆ ಈ ನಿಟ್ಟನಲ್ಲಿ ವಿದ್ಯಾವಂತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಿಂದಲೇ ರೈತರ ಪರಿಶ್ರಮದ ಬಗ್ಗೆ ಅರಿವು ಪಡೆದು ಭವಿಷ್ಯದಲ್ಲಿ ಕೃಷಿ ಕಾಯಕವನ್ನು ಮುಂದುವರಿಸಬೇಕೆಂದರು.

Advertisement

ಆಡಳಿತ ಮಂಡಳಿಯ ನಿರ್ದೇಶಕ   ಉಮೇಶ್ ಶೆಟ್ಟಿ ಸಾಯಿರಾಂ ಮಾತನಾಡಿ,  ಭತ್ತದ ಕೃಷಿಯಿಂದ ಈ ಮಣ್ಣಿನ ಜೊತೆಗಿನ ಒಡನಾಟ ಸಾಧ್ಯ. ಅದು ಚಿಕಿತ್ಸಕ ರೀತಿಯಲ್ಲಿ ದೇಹದ ಮೇಲೆ ಉತ್ತಮ ಪರಿಣಾಮ ಬೀರಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಜೊತೆಗೆ ಗದ್ದೆ ಇದ್ದಲ್ಲಿ ನೀರಿನ ಅಭಾವ ಕಡಿಮೆ ಎಂದು ಅಭಿಪ್ರಾಯಪಟ್ಟರು.

ಕೃಷಿ ಚಟುವಟಿಕೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್, ಪದವಿಪೂರ್ವ ವಿಭಾಗದ ಮುಖ್ಯಸ್ಥ ಮಹೇಶ್ ನಿಟಿಲಾಪುರ, ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ಶೈಲಶ್ರೀ ರೈ, ಕೃಷಿಕ ನಾರಾಯಣ ಗೌಡ ಸಂಕೇಶ, ಉಪನ್ಯಾಸಕವೃಂದ, ಶಿಕ್ಷಕವೃಂದ, ವಿದ್ಯಾರ್ಥಿಗಳು  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.

ಕಾಲೇಜಿನ ಪಕ್ಕದಲ್ಲಿರುವ ಹಡಿಲು ಬಿದ್ದ ಸುಮಾರ 60 ಸೆಂಟ್ಸ್ ಭತ್ತದ ಗದ್ದೆಯಲ್ಲಿ  ಈ ವರ್ಷದಿಂದ  ಭತ್ತದ  ನಾಟಿ ಮಾಡಲು ಪ್ರಾರಂಭಿಸಲಾಗಿದೆ.   ಕಟಾವು ಮಾಡುವವರೆಗಿನ ಎಲ್ಲಾ ಪ್ರಕ್ರಿಯೆ ಶಾಲಾ ವಿದ್ಯಾರ್ಥಿಗಳೇ ಮಾಡಲಿದ್ದಾರೆ. ಇಲ್ಲಿ ಬೆಳೆಯಲಾದ ಅಕ್ಕಿಯನ್ನು ಶಾಲಾ ಬಿಸಿಯೂಟಕ್ಕೆ ಉಪಯೋಗಿಸಿಕೊಳ್ಳಲಾಗುವುದು. ಭತ್ತದ ಕೃಷಿಯ ಪ್ರಾಯೋಗಿಕ ಪಾಠ ಮತ್ತು ಕೃಷಿಯತ್ತ ಆಸಕ್ತಿ ಮೂಡಿಸಲು, ರೈತರ ಕಷ್ಟ ಅರಿಯಲು ಇಂತಹ ಕಾರ್ಯಕ್ರಮದಿಂದ ಸಾಧ್ಯ.-  ಮಹೇಶ್ ನಿಟಲಾಪುರ , ಪ್ರಾಂಶುಪಾಲ ಸರಸ್ವತೀ ಪದವಿ ಪೂರ್ವ ವಿದ್ಯಾಲಯ,

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

32 minutes ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

52 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

16 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

16 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

17 hours ago