ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…