ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
Advertisement
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…