ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

January 31, 2020
6:34 AM

ಮಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ; ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ,     ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳ ಬಗ್ಗೆ ವಿದ್ಯಾರ್ಥಿ ನಿಲಯಗಳ ಮಾಹಿತಿ ಪಡೆದು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಲಾಗಿನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

Advertisement

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ. ಸಂಖ್ಯಾಬಲ ಹೆಚ್ಚಿಸಲಾಗಿರುವ ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ  ದಾಖಲೆಗಳೊಂದಿಗೆ ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-8050370006, 8050770009 ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror