ಸವಣೂರು : ಸವಣೂರು ಚಂದ್ರನಾಥ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.
ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ರಾಜೇಶ್ ಶೆಟ್ಟಿ ಮೇನಾಲ ,ದೇಶದ ಆತ್ಮವೇ ಆಧ್ಯಾತ್ಮ . ದೇಶದಲ್ಲಿನ ಸಂಸ್ಕಾರ, ಸಂಸ್ಕೃತಿ ಬೇರೆ ಎಲ್ಲೂ ಕಾಣಸಿಗದು. ಸ್ವಾಮಿ ವಿವೇಕಾನಂದರ ಅಮೇರಿಕಾ ಪ್ರವಾಸದ ಬಳಿಕ ದೇಶದ ಮೌಲ್ಯಗಳು ವಿಶ್ವವ್ಯಾಪಿಯಾಯಿತು. ಇಂತಹ ಕಾರ್ಯಕ್ರಮದಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಂಡು ನಮ್ಮ ಹಿರಿಯರು ಪಾಲಿಸಿಕೊಂಡ ಬಂದ ಆಚರಣೆಗಳು ಪದ್ದತಿಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಮಾತನಾಡಿ, ಧರ್ಮದ ಹಾದಿಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ. ಕ್ಷಣಿಕ ಸುಖಕ್ಕಿಂತಲೂ ಆತ್ಮ ಶುದ್ದಿಯಿಂದ ಮಾಡುವ ಕಾರ್ಯಗಳಿಂದ ಸಿಗುವ ಸುಖ ಶ್ರೇಷ್ಠವಾದದು ಎಂದರು.
ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ , ಸವಣೂರು ಹಿಂ.ಜಾ.ವೇಯ ಕಾರ್ಯದರ್ಶಿ ಸಚಿನ್ ಕೋಟ್ಯಾನ್ ಮಡಕೆ ಉಪಸ್ಥಿತರಿದ್ದರು.
ಅರ್ಚಕ ಎಸ್.ಗೋಪಾಲಕೃಷ್ಣ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಪ್ರಸ್ತಾವಿಸಿದರು. ಅಧ್ಯಕ್ಷ ಜನಾರ್ಧನ ಪಂಜ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಜಗದೀಶ್ ಕೆಡೆಂಜಿ ವಂದಿಸಿದರು. ಪ್ರವೀಣ್ ಚೆನ್ನಾವರ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…