ಸುಳ್ಯ: ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ, ತಾಲೂಕು ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಇದರ ವತಿಯಿಂದ `ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಜಾಗೃತಿ ಜಾಥಾ ಸುಳ್ಯದಲ್ಲಿ ಶನಿವಾರ ನಡೆಯಿತು.
ಸುಳ್ಯ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಪುರುಷೋತ್ತಮ ಎಂ. ಜಾಥಾಕ್ಕೆ ಚಾಲನೆ ನೀಡಿದರು. ಸುಳ್ಯ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಯಶ್ವಂತ್‍ಕುಮಾರ್ ಕೆ., ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಸುಳ್ಯ ಎಸ್‍ಐ ಎಂ.ಆರ್.ಹರೀಶ್, ಕ್ರೈಂ ಎಸ್‍ಐ ರತ್ನಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಡಾ.ಸುಂದರ್ ಕೇನಾಜೆ, ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಟರಾಜ್, ವಕೀಲರ ಸಂಘದ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್, ಕೋಶಾಧಿಕಾರಿ ವಿನಯಕುಮಾರ್ ಮುಳುಗಾಡು, ವಕೀಲರಾದ ನಳಿನ್‍ಕುಮಾರ್ ಕೋಡ್ತುಗುಳಿ, ಭಾಸ್ಕರ ರಾವ್, ಜಗದೀಶ ಹುದೇರಿ, ಹರೀಶ್ ಬೂಡುಪನ್ನೆ, ಧರ್ಮಪಾಲ ಕೊೈಂಗಾಜೆ, ವಕೀಲರ ಸಂಘದ ಪದಾಧಿಕಾರಿಗಳು, ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಸುಳ್ಯ ನಗರದ ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಥಾವು ನಗರದಲ್ಲಿ ಸಂಚರಿಸಿ ಕೆವಿಜಿ ಪುರಭವನದಲ್ಲಿ ಸಮಾಪನಗೊಂಡಿತು.
ಹೆಣ್ಣು ಮಕ್ಕಳ ರಕ್ಷಣೆ ಸಮಾಜದ ಹೊಣೆ: ನ್ಯಾಯಾಧೀಶ ಯಶ್ವಂತ್‍ಕುಮಾರ್
ನಮ್ಮ ಸಂವಿಧಾನದ ಆಶಯದಂತೆ ಹೆಣ್ಣು ಮಕ್ಕಳನ್ನು ರಕ್ಷಿಸುವುದು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡುವುದು ಸಮಾಜದ ಹೊಣೆ ಎಂದು ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸುಳ್ಯ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಯಶ್ವಂತ್‍ಕುಮಾರ್.ಕೆ ಹೇಳಿದರು. ಲಿಂಗ ತಾರತಮ್ಯ ಮತ್ತು ಲಿಂಗಾನುಪಾತದಲ್ಲಿನ ವ್ಯತ್ಯಾಸ ಸಮಾಜಕ್ಕೆ ಮತ್ತು ದೇಶಕ್ಕೆ ದೊಡ್ಡ ಪಿಡುಗು ಆಗಬಹುದು. ಲಿಂಗ ತಾರತಮ್ಯ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲೆಂದೇ ಕಾನೂನಿನಲ್ಲಿ ತಿದ್ದುಪಡಿ ತಂದು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕನ್ನು ನೀಡಲಾಗಿದೆ. ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಇತರ ಸ್ಥಾನಮಾನಗಳಲ್ಲಿಯೂ ಸಮಾನತೆಯನ್ನು ನೀಡಲಾಗಿದೆ. ಹೆಣ್ಣು ಮಗು ಎಂಬ ತಾತ್ಸಾರ ಮನೋಭಾವ ಬೇಡ. ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಶಿಕ್ಷಣ ನೀಡುವ ನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಅಗತ್ಯ ಎಂದು ಅವರು ಹೇಳಿದರು.
Advertisementವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ ದೇಶದಲ್ಲಿ ಹಲವೆಡೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಕಂಡು ಬರುತ್ತದೆ. ಅದನ್ನೆಲ್ಲ ಮೆಟ್ಟಿ ನಿಂತು ಹೆಣ್ಣು ಮಕ್ಕಳು ಗೌರವಯುತ ಬದುಕನ್ನು ನಡೆಸುವ ವಾತಾವರಣ ನಿರ್ಮಾಣವಾಗಬೇಕು ಎಂದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …