ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.
ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.
ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.