ಮಡಿಕೇರಿ :ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಗಾಯಗೊಂಡ ಘಟನೆ ಮೇಕೂರು ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ.
ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಪೆರುಮಾಳ್ (60) ಮೇಕೂರು ಹೊಸ್ಕೇರಿ ಗ್ರಾಮದ ಮಾದಯ್ಯ ಎಂಬುವವರ ಕಾಫಿ ತೋಟದಲ್ಲಿ ಕೆಸಲ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಬಳಿಕ ಕಾಡಾನೆಯು ಪೆರುಮಾಳ್ ಅನ್ನು ಸೊಂಡಿಲಿನಿಂದ ಎತ್ತಿ ಎಸೆದಿದ್ದು, ಪರಿಣಾಮ ಪೆರುಮಾಳ್ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳು ಪೆರುಮಾಳ್ ಅನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ತಿತಿಮತಿ ಉಪ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel