ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ಮಾಡಿದೆ.
ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ. ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.
ಕಾಂಗ್ರೆಸ್ ಟೀಕೆ
ಕೆಪಿಸಿಸಿ ಅಧ್ಯಕ್ಷರ ಮನೆಗೆ ದಾಳಿ ನಡೆಸಿದ್ದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು, ಈ ದಾಳಿ ಬಿಜೆಪಿ ಸರ್ಕಾರದ ಪ್ರತೀಕಾರದ ರಾಜಕೀಯ ಎಂದು ಟೀಕಿಸಿದ್ದಾರೆ.ಡಿ ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel