ಒಮಿಕ್ರಾನ್ ಹರಡುವಿಕೆಯ ಹಿನ್ನಲೆಯಲ್ಲಿ ಹೊಸವರ್ಷಾಚರಣೆಗೆ ವಿವಿಧ ರಾಜ್ಯ ಸರ್ಕಾರಗಳು ನಿಷೇಧ ಹೇರಿದ್ದು, ಮಾತ್ರವಲ್ಲ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಗೋವಾ ರಾಜ್ಯ ಪ್ರವಾಸಿಗರಿಗೆ ಗುಡ್‌ನ್ಯೂಸ್ ನೀಡಿದೆ. ಡಿಸೆಂಬರ್ 31 ರಂದು ರಾಜ್ಯದಲ್ಲಿ ಪಾರ್ಟಿ ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡಲಾಗಿದ್ದು. ಆದರೆ ಆಗಮಿಸುವ ಅತಿಥಿಗಳು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಅಥವಾ ಎರಡು ಡೋಸ್ ಲಸಿಕೆ ಪ್ರಮಾಣಪತ್ರ ಕಡ್ಡಾಯವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ವೇಳೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಯಾವುದೇ ಕಟ್ಟುನಿಟ್ಟಿನ ನಿಯಮ ಸದ್ಯ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel