ಕೋವಿಡ್-19 ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಹಂಗೇರಿ ಹಾಗೂ ಅಮೆರಿಕದ ವಿಜ್ಞಾನಿಗಳಾದ ಕ್ಯಾಲಿಟನ್ ಕಾರಿಕೊ nಹಾಗೂ ಡ್ರೂ ವೈಸ್‌ಮನ್ ಅವರಿಗೆ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.
ವೈಜ್ಞಾನಿಕ ಜಗತ್ತಿನಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಅಸೆಂಬ್ಲಿ ಆಯ್ಕೆ ಮಾಡಿದೆ. ಪ್ರಶಸ್ತಿ ವಿಜೇತರಿಗೆ 8.31 ಕೋಟಿ ರೂ. ನಗದು ಬಹುಮಾನ ರೂಪದಲ್ಲಿ ಸಿಗಲಿದೆ. ಕೋವಿಡ್-19 ವಿರುದ್ಧ ಪರಿಣಾಮಕಾರಿಯಾದ ಎಮ್‌ಆರ್‌ಎನ್‌ಎ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕಾರಿಕೊ ಹಾಗೂ ವೈಸ್‌ಮನ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ 2023ರ ನೋಬೆಲ್ ಪುರಸ್ಕಾರವನ್ನು ಅವರಿಗೆ ನೀಡಲು ನಿರ್ಧರಿಸಿದ್ದಾಗಿ ಆಯ್ಕೆಯ ಸಮಿತಿ ತಿಳಿಸಿದೆ.
ಕಟಾಲಿನ್ ಕರಿಕೊ ಅವರು 2022 ರವರೆಗೆ ಬಯೋಎನ್‌ಟೆಕ್‌ನಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸದ್ದರು. ಆರ್‌ಎನ್‌ಎ ಪ್ರೋಟೀನ್ ಮುಖ್ಯಸ್ಥರಾಗಿದ್ದರು. ನಂತರ ಒಂದು ಸಂಶೋಧನ ಕಂಪನಿಯ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಹಂಗೇರಿಯ ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇದರ ಜತೆಗೆ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.
ಇನ್ನು ಕಟಾಲಿನ್ ಕರಿಕೊ ಅವರ ಜತೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪಡೆದವರು ಡ್ರೂ ವೈಸ್‌ಮನ್. ಇವರು ಪೆರೆಲ್‌ಮನ್ ಲಸಿಕೆ ಸಂಶೋಧನ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ. ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಅಭೂತಪೂರ್ವ. ಕೊರೊನಾ ಸಮಯದಲ್ಲಿ mRNA ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.
– ಅಂತರ್ಜಾಲ ಮಾಹಿತಿ