ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

June 6, 2025
8:41 PM

ಕರ್ನಾಟಕ ಹಾಲು ಒಕ್ಕೂಟ – ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ಗೆ ಸಾಧ್ಯವಾಗಿದೆ.

ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಇದರೊಂದಿಗೆ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ. ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದು ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆ ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಕೊಡುಗೆ ನೀಡಿವೆ. ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್‌ಗಳು ಮತ್ತು ಇತರೇ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror