ಕರ್ನಾಟಕ ಹಾಲು ಒಕ್ಕೂಟ – ಕೆಎಂಎಫ್ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ಗೆ ಸಾಧ್ಯವಾಗಿದೆ.
ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಇದರೊಂದಿಗೆ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ. ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದು ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆ ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಕೊಡುಗೆ ನೀಡಿವೆ. ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್‌ಗಳು ಮತ್ತು ಇತರೇ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿತ್ತು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…