ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.
ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.
ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…