ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

June 9, 2023
4:45 PM

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Advertisement
Advertisement

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

Advertisement

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror