108 ಆಂಬ್ಯುಲೆನ್ಸ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel