ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

April 30, 2024
7:15 PM
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.

Advertisement

ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು  ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.

ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್‌ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group