110 ಕೆವಿ ಸಬ್ ಸ್ಟೇಶನ್ : ಫೆ.10 ರೊಳಗೆ ಸಭೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

January 23, 2020
7:53 PM

ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಸತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,950 ಮನೆಗಳಿಗೆ ಹಣ ಪಾವತಿಗೆ ಬಾಕಿ ಇದೆ. ಈ ಕುರಿತು ಪಟ್ಟಿ ಸಿದ್ಧ ಮಾಡಿ ವಸತಿ ಸಚಿವರಿಗೆ ಸಲ್ಲಿಸಲಾಗಿದೆ. ಸದ್ಯದಲ್ಲಿಯೇ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು. ನಗರದ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪರಿಶೀಲಿಸಿ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಡಪ್ಪಾಡಿಗೆ ವಿಶೇಷ ಪ್ಯಾಕೇಜ್ ಪ್ರಸ್ತಾವನೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಿದ ಮಡಪ್ಪಾಡಿಯ ಮೂಲಭೂತ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದ ಬೇಡಿಕೆ ಬಂದಿತ್ತು. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಮುಖ ಬೇಡಿಕೆಗಳ ಪರಿಹಾರಕ್ಕಾಗಿ ಪ್ಯಾಕೇಜ್ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror