ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಸತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,950 ಮನೆಗಳಿಗೆ ಹಣ ಪಾವತಿಗೆ ಬಾಕಿ ಇದೆ. ಈ ಕುರಿತು ಪಟ್ಟಿ ಸಿದ್ಧ ಮಾಡಿ ವಸತಿ ಸಚಿವರಿಗೆ ಸಲ್ಲಿಸಲಾಗಿದೆ. ಸದ್ಯದಲ್ಲಿಯೇ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು. ನಗರದ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪರಿಶೀಲಿಸಿ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಡಪ್ಪಾಡಿಗೆ ವಿಶೇಷ ಪ್ಯಾಕೇಜ್ ಪ್ರಸ್ತಾವನೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಿದ ಮಡಪ್ಪಾಡಿಯ ಮೂಲಭೂತ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದ ಬೇಡಿಕೆ ಬಂದಿತ್ತು. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಮುಖ ಬೇಡಿಕೆಗಳ ಪರಿಹಾರಕ್ಕಾಗಿ ಪ್ಯಾಕೇಜ್ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…