147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ | ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ

August 17, 2024
8:20 PM

ಕೈಗಾರಿಕಾ ಸಚಿವ(Industries Minister) ಎಂ.ಬಿ.ಪಾಟೀಲ(M B Patil) ಅಧ್ಯಕ್ಷತೆಯಲ್ಲಿ ನಡೆದ 147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಟೊಯೊಟಾ ಕಿರ್ಲೊಸ್ಕರ್‌ ಮೋಟರ್ಸ್‌ ಲಿಮಿಟೆಡ್‌ನ (ಟಿಕೆಎಂಎಲ್‌) ಇನೊವಾ ಹೈಕ್ರಾಸ್‌ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟಾ ಇಂಡಿಯಾ ಆಟೊ ಪಾರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ.

Advertisement
Advertisement
Advertisement

ಅಧ್ಯಕ್ಷತೆಯಲ್ಲಿ ನಡೆದ 147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಟೊಯೊಟಾ ಕಿರ್ಲೊಸ್ಕರ್‌ ಮೋಟರ್ಸ್‌ ಲಿಮಿಟೆಡ್‌ನ (ಟಿಕೆಎಂಎಲ್‌) ಇನೊವಾ ಹೈಕ್ರಾಸ್‌ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟೆಟ್ಸು ಇಂಡಿಯಾ ಆಟೊ ಪಾರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ₹2,280.52 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 20 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ರಾಜ್ಯದಲ್ಲಿ 3,457 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

Advertisement

ಮಿತಿಯು ಅನುಮೋದಿಸಿದ ಯೋಜನೆಗಳಲ್ಲಿ ಮುಂಬೈನ ಐಎಲ್‌ವಿ ಸೌತ್‌ ವೇರ್‌ಹೌಸಿಂಗ್‌ ಪಾರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ₹423 ಕೋಟಿ ಮೊತ್ತದ ಕೈಗಾರಿಕಾ ಪಾರ್ಕ್‌, ಬೆಳಗಾವಿಯ ಮೃಣಾಲ್‌ ಷುಗರ್ಸ್‌ ಲಿಮಿಟೆಡ್‌ ಧಾರವಾಡ ಜಿಲ್ಲೆಯಲ್ಲಿ ₹386.86 ಕೋಟಿ ವೆಚ್ಚದ ಸಕ್ಕರೆ ಕಾರ್ಖಾನೆ ಸ್ಥಾಪನೆ, ಅಯೊಮಾ ಆಟೊಮೋಟಿವ್‌ ಫಾಸ್ಟನರ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ ₹ 210 ಕೋಟಿ ಮೊತ್ತದ ವಾಹನ ಬಿಡಿಭಾಗ ತಯಾರಿಕಾ ಘಟಕಗಳ ಸ್ಥಾಪನೆಯು ಪ್ರಮುಖವಾಗಿವೆ. ವೈಮಾಂತರಿಕ್ಷ ಜೋಡಣಾ ಘಟಕ, ಹಾಲು ಸಂಸ್ಕರಣಾ ಘಟಕಗಳೂ ಒಪ್ಪಿಗೆ ಪಡೆದ ಯೋಜನೆಗಳಲ್ಲಿ ಸೇರಿವೆ. ರಾಮನಗರ, ಕೋಲಾರ, ಬೆಳಗಾವಿ, ತುಮಕೂರು, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಈ ಕೈಗಾರಿಕಾ ಘಟಕಗಳು ಅಸ್ತಿತ್ವಕ್ಕೆ ಬರಲಿವೆʼ ಎಂದು ಸಚಿವ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.

₹50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 6 ಪ್ರಮುಖ ಬೃಹತ್‌ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹2025.71 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 2,440 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ₹15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 13 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 214.81 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 1017 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ ಎಂದು ವಿವರಿಸಿದರು. ಹೆಚ್ಚುವರಿ ಬಂಡವಾಳ ಹೂಡಿಕೆಯ 1 ಯೋಜನೆಗೆ ಸಭೆಯು ಅನುಮೋದಿಸಿದ್ದು ಇದರಿಂದ ₹40 ಕೋಟಿ ಬಂಡವಾಳ ಹೂಡಿಕೆ ಆಗಲಿದೆ.

Advertisement

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಐಟಿ-ಬಿಟಿ ಇಲಾಖೆಯ ನಿರ್ದೇಶಕ ದರ್ಶನ್‌ ಎಚ್‌. ವಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror