15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್​ ತಡೆ: ಅನರ್ಹ ಶಾಸಕರು ನಿರಾಳ

September 26, 2019
7:06 PM

ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್​​ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್​ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.

ಅಕ್ಟೋಬರ್​ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್​ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror