ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…