ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

March 6, 2026
8:22 PM
ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳು ಘೋಷಿಸಲಾಗಿದೆ. ಶೂನ್ಯ ಬಡ್ಡಿ ಕೃಷಿ ಸಾಲ, ಮಿಲೆಟ್ ಹಬ್, ಶೀತಲಗೃಹಗಳು ಮತ್ತು ಸೌರ ಕೃಷಿ ಯೋಜನೆ ಪ್ರಮುಖವಾಗಿವೆ.

ರಾಜ್ಯ ಬಜೆಟ್‌ 2026-27ರಲ್ಲಿ ರೈತರ ಆದಾಯ ಹೆಚ್ಚಿಸಲು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ ಮತ್ತು ಪರಿಸರ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು ಇಲ್ಲಿವೆ.

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ  ಘೋಷಣೆಗಳು :

  1. ಮುಖ್ಯಮಂತ್ರಿಗಳ ಕೃಷಿ ವಿಸ್ತಾರ ಯೋಜನೆ : ಮುಂದಿನ ಮೂರು ವರ್ಷಗಳಲ್ಲಿ ಕೃಷಿ ಮೌಲ್ಯವರ್ಧನೆ ಮತ್ತು ಕೃಷಿ ತ್ಯಾಜ್ಯ ಬಳಕೆ ಉತ್ತೇಜಿಸಲು ₹100 ಕೋಟಿ ಯೋಜನೆ.
  2. ಮಿಲೆಟ್ ಹಬ್ ಸ್ಥಾಪನೆ :  ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಉತ್ತೇಜನಕ್ಕೆ ಏಕಗವಾಕ್ಷಿ ವ್ಯವಸ್ಥೆ.
  3. ರೈತ ಕರೆ ಕೇಂದ್ರಕ್ಕೆ AI ತಂತ್ರಜ್ಞಾನ : AI ಆಧಾರಿತ ರೈತ ಸಲಹಾ ವ್ಯವಸ್ಥೆ.
  4.  ಸಸ್ಯ ಸಂಜೀವಿನಿ ಯೋಜನೆ :  ಬೆಳೆಗಳಲ್ಲಿ ಕೀಟ ಹಾಗೂ ರೋಗ ನಿಯಂತ್ರಣಕ್ಕೆ ವಿಶೇಷ ಯೋಜನೆ.
  5. ಹೈಟೆಕ್ ಹಾರ್ವೆಸ್ಟರ್ ಹಬ್ : ಬಿತ್ತನೆ ಮತ್ತು ನಾಟಿ ಯಂತ್ರಗಳ ಸೌಲಭ್ಯ ನೀಡಿ ಕೃಷಿ ವೆಚ್ಚ ಕಡಿತ.
  6. ಸಾವಯವ ಕೃಷಿಗೆ ಉತ್ತೇಜನ : ಮಂಡ್ಯ ಜಿಲ್ಲೆಯ ಪಾಂಡವಪುರವನ್ನು ಸಂಪೂರ್ಣ ಸಾವಯವ ತಾಲ್ಲೂಕು ಮಾಡುವ ಯೋಜನೆ.
  7. ಅಡಿಕೆ ಮತ್ತು ತೆಂಗು ಬೆಳೆಗಳಿಗೆ ಕೀಟ ನಿಯಂತ್ರಣ ಯೋಜನೆ : ಸಮುದಾಯ ಆಧಾರಿತ ರೋಗ-ಕೀಟ ನಿಯಂತ್ರಣಕ್ಕೆ ₹10 ಕೋಟಿ.
  8. ತೋಟಗಾರಿಕೆ ಉತ್ಪನ್ನಗಳಿಗೆ ಶೀತಲಗೃಹ :  ₹64 ಕೋಟಿಯಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ.
  9. ಮೀನುಗಾರರಿಗೆ ₹20,000 ಉಪಕರಣ ಕಿಟ್ : ಮೀನುಗಾರರಿಗೆ ಉಚಿತ ಉಪಕರಣ ಕಿಟ್ ವೆಚ್ಚವನ್ನು ₹20,000ಕ್ಕೆ ಹೆಚ್ಚಳ.
  10. ಮಂಗಳೂರಿನಲ್ಲಿ ಮೀನುಗಾರಿಕೆ Centre of Excellence : ಮೀನುಗಾರಿಕೆ ಸಂಶೋಧನೆ ಮತ್ತು ತರಬೇತಿಗೆ ವಿಶೇಷ ಕೇಂದ್ರ.
  11. ಆಧುನಿಕ ಮೀನು ಮಾರುಕಟ್ಟೆಗಳು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬಾಗಲಕೋಟೆಯಲ್ಲಿ ಹೊಸ ಮಾರುಕಟ್ಟೆಗಳು.
  12. ರೈತರಿಗೆ ₹30,000 ಕೋಟಿ ಶೂನ್ಯ ಬಡ್ಡಿ ಕೃಷಿ ಸಾಲ : 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಗುರಿ.
  13. 1,628 PACS ಸಂಘಗಳ ಗಣಕೀಕರಣ : ಸಹಕಾರ ಕ್ಷೇತ್ರದಲ್ಲಿ ಡಿಜಿಟಲ್ ಸೇವೆ ವಿಸ್ತರಣೆ.
  14. ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ : 7,110 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ “ಪ್ರಗತಿ ಪಥ” ಯೋಜನೆ.
  15. ಸೌರ ಕೃಷಿ ಯೋಜನೆ : ಮುಖ್ಯಮಂತ್ರಿ ಸೌರ ಕೃಷಿ ಯೋಜನೆಯಡಿ 3000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಗುರಿ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka Budget 2026-27 announces several initiatives for farmers including a ₹100 crore agriculture expansion scheme, millet hub, pest management for arecanut and coconut crops, cold storage infrastructure, fisheries support, and ₹30,000 crore zero-interest farm loans. Rural road development and solar agriculture initiatives are also key highlights aimed at strengthening the rural economy.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror