ಪ್ರಕೃತಿಯ ಮುನಿಸನ್ನು(Natural Disaster) ತಡೆಯುವ ಶಕ್ತಿ ಈ ಮಾನವನಿಗೆ(Human) ಅಸಾಧ್ಯದ ಮಾತು. ವಿಜ್ಞಾನ ಎಷ್ಟೇ ಮುಂದುವರೆದರು ಇದು ಮಾತ್ರ ಅಸಾಧ್ಯ. ಪರಿಸರವನ್ನು ನಾಶ ಮಾಡಬಹುದೇ ವಿನಃ ಅದರ ಪ್ರಕೋಪವನ್ನು ತಡೆಯುವ ಶಕ್ತಿ ಇಲ್ಲ. ಜಪಾನ್‌ನಲ್ಲಿ(Japan) ಒಂದೇ ದಿನ 155 ಬಾರಿ ಭೂಕಂಪ(Earthquakes) ಸಂಭವಿಸಿದ ಪರಿಣಾಮ 30 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ(New year)) ಭೂಕಂಪ ಸಂಭವಿಸಿದೆ ಎನ್ನುವುದು ವಿಷಾದ.
ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ. ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.
ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಘಟನೆಯಲ್ಲಿ ಇದುವರೆಗೆ ಒಟ್ಟು 30 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಬಳಿ ಕೇವಲ 5,000 ಮನೆಗಳಿರುವ ಕರಾವಳಿ ಪಟ್ಟಣವಾದ ಸುಜುದಲ್ಲಿ, 1,000 ಮನೆಗಳು ನಾಶವಾದವು ಎಂದು ವರದಿಯಾಗಿದೆ.
ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
13 people have died as a result of 155 earthquakes (Earthquakes) occurred in Japan in one day. An earthquake occurred in the New Year and caused huge casualties. A 7.5-magnitude earthquake in Ishikawa Prefecture on the main island of Honshu generated tsunami waves up to one meter high.
- ಅಂತರ್ಜಾಲ ಮಾಹಿತಿ
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…