ದಿನದಿಂದ ದಿನಕ್ಕೆ ಏರುತ್ತಿದೆ ಕೋವಿಡ್ ಪ್ರಕರಣಗಳು | 24 ಗಂಟೆಗಳಲ್ಲಿ 1,573 ಕೊರೋನಾ ವೈರಸ್ ಸೋಂಕು ಪತ್ತೆ..!

March 28, 2023
1:30 PM

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ
August 1, 2026
3:28 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರೀ ಮಳೆ ಅಬ್ಬರ : ಹಲವೆಡೆ ಭೂಕುಸಿತ, ಪ್ರವಾಹ ಭೀತಿ
August 1, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror