ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದಿನವೊಂದರಲ್ಲಿ ಕೇರಳದಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,30,841 ಮಂದಿ ಮೃತಪಟ್ಟಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 1.30ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 1.47 ರಷ್ಟಿದೆ. ಈವರೆಗೆ ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಮರಣ ಪ್ರಮಾಣ ಶೇ 1.19 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.79 ರಷ್ಟಿದೆ. ದೇಶದಲ್ಲಿ ಒಟ್ಟಾರೆ 4,41,65,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…