ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷಾರಂಭದಿಂದ ನವೆಂಬರ್‌ವರೆಗೆ 1585 ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್. ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಕ್ಷಯರೋಗ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಆಶಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಹೋಗಿ ಪರಿಶೀಲಿಸುತ್ತಿದ್ದಾರೆ. ಕ್ಷಯರೋಗದ ಲಕ್ಷಣಗಳು, ಚಿಕಿತ್ಸೆ ಕ್ರಮಗಳು, ಸಹಾಯಧನ ಸೇರಿದಂತೆ ವಿವಿಧ ಮಾಹಿತಿಗಳ ಪ್ರಚಾರ ಮಾಡಲಾಗುತ್ತಿದೆ. ಇದೇ ಮಾರ್ಚ್‌ವರೆಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel