Advertisement
ಸುದ್ದಿಗಳು

ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ : ಶೇ 17ರಷ್ಟು ವೇತನ ಹೆಚ್ಚಿಸಿ ಸರ್ಕಾರ ಆದೇಶ : ಮುಷ್ಕರ ತಾತ್ಕಾಲಿಕವಾಗಿ ವಾಪಸ್

Share

ಎಲ್ಲಾ ಸರ್ಕಾರಿ ಕಾರ್ಯಗಳಲ್ಲಿ ವ್ಯತ್ಯಯ ಆಗಿದ್ದನ್ನು ಮನಗಂಡ ಸರ್ಕಾರ, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದು ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ನೌಕರರ ಸಂಘ ಸ್ವಾಗತಿಸಿದೆ.  ಈ ಮೂಲಕ ಮುಷ್ಕರವನ್ನು ವಾಪಸ್​ ಪಡೆದುಕೊಂಡಿದೆ.

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ಕೈಗೊಂಡಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ  ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು.

ಮುಷ್ಕರ ಹಿಂಪಡೆದ ರಾಜ್ಯ ಸರ್ಕಾರಿ ನೌಕರರ ಸಂಘ

ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಣೆ ಮಾಡಿದೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.ಷಡಕ್ಷರಿ ಸೂಚಿಸಿದ್ದಾರೆ. ಹಾಗೂ ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

19 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

19 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

19 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

22 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago