2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

March 31, 2025
3:50 PM

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.……..ಮುಂದೆ ಓದಿ…..

Advertisement

ಗುಜರಾತಿನಲ್ಲಿ  5.4 ಗಿಗಾವ್ಯಾಟ್ ಸಾಮರ್ಥ್ಯದ ಸೌರ ಘಟಕವನ್ನು ಅವರು ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಭವಿಷ್ಯದ ಔದ್ಯೋಗಿಕ ವರದಿ 2025ರ ಪ್ರಕಾರ ಹಸಿರು ಇಂಧನ ಪರಿವರ್ತನೆ ಕ್ಷೇತ್ರದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ . 2030ರ ವೇಳೆಗೆ  170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.  2014ರಲ್ಲಿ ದೇಶದಲ್ಲಿ ಕೇವಲ 2.82 ಗಿಗಾವ್ಯಾಟ್ ಸೌರಶಕ್ತಿ ಉತ್ಪಾದಿಸಲಾಗುತ್ತಿತ್ತು. ಆದರೆ ಇದೀಗ 104 ಗಿಗಾವ್ಯಾಟ್ ಸೌರಶಕ್ತಿಯನ್ನು ಉತ್ಪಾದಿಸಲಾಗುತ್ತಿದ್ದು, ಶೇ. 3 ಸಾವಿರದ  580 ರಷ್ಟು ಸೌರಶಕ್ತಿ ಉತ್ಬಾದನೆ ಪ್ರಮಾಣ ಹೆಚ್ಚಳವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಪರಿಸರ ಸುಸ್ಧಿರತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ದಾಪುಗಾಲು ಇಡುತ್ತಿದೆ.  2030ರ ವೇಳೆಗೆ ಭಾರತದಲ್ಲಿ ಸೌರ ಮಾಡ್ಯೂಲ್ ಗಳ ಉತ್ಪಾದನೆಯಲ್ಲಿ  150 ಗಿಗಾವ್ಯಾಟ್ ತಲುಪುವ ವಿಶ್ವಾಸವಿದೆ ಎಂದು ಸಚಿವ ಪ್ರಲ್ದಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ
ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ
April 10, 2025
7:18 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group