ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.……..ಮುಂದೆ ಓದಿ…..
ಗುಜರಾತಿನಲ್ಲಿ 5.4 ಗಿಗಾವ್ಯಾಟ್ ಸಾಮರ್ಥ್ಯದ ಸೌರ ಘಟಕವನ್ನು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಭವಿಷ್ಯದ ಔದ್ಯೋಗಿಕ ವರದಿ 2025ರ ಪ್ರಕಾರ ಹಸಿರು ಇಂಧನ ಪರಿವರ್ತನೆ ಕ್ಷೇತ್ರದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ . 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದರು. 2014ರಲ್ಲಿ ದೇಶದಲ್ಲಿ ಕೇವಲ 2.82 ಗಿಗಾವ್ಯಾಟ್ ಸೌರಶಕ್ತಿ ಉತ್ಪಾದಿಸಲಾಗುತ್ತಿತ್ತು. ಆದರೆ ಇದೀಗ 104 ಗಿಗಾವ್ಯಾಟ್ ಸೌರಶಕ್ತಿಯನ್ನು ಉತ್ಪಾದಿಸಲಾಗುತ್ತಿದ್ದು, ಶೇ. 3 ಸಾವಿರದ 580 ರಷ್ಟು ಸೌರಶಕ್ತಿ ಉತ್ಬಾದನೆ ಪ್ರಮಾಣ ಹೆಚ್ಚಳವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಪರಿಸರ ಸುಸ್ಧಿರತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ದಾಪುಗಾಲು ಇಡುತ್ತಿದೆ. 2030ರ ವೇಳೆಗೆ ಭಾರತದಲ್ಲಿ ಸೌರ ಮಾಡ್ಯೂಲ್ ಗಳ ಉತ್ಪಾದನೆಯಲ್ಲಿ 150 ಗಿಗಾವ್ಯಾಟ್ ತಲುಪುವ ವಿಶ್ವಾಸವಿದೆ ಎಂದು ಸಚಿವ ಪ್ರಲ್ದಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…