ಜಿ-20 ವಿದೇಶಾಂಗ ಸಚಿವರ ಸಭೆ: ಬಹುಪಕ್ಷೀಯತೆ, ಆಹಾರ, ಇಂಧನ, ಭದ್ರತೆ ಮಹತ್ತರ ಚರ್ಚೆ ಆರಂಭ

March 2, 2023
3:42 PM

ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಧ್ಯೇಯೋದ್ದೇಶದೊಂದಿಗೆ  ಭಾರತದ ಅಧ್ಯಕ್ಷತೆಯಲ್ಲಿ  ಜಿ -20 ಶೃಂಗ ಸಭೆ ನಡೆಯುತ್ತಿರುವುದು ನಮ್ಮಲ್ಲರ ಹೆಮ್ಮೆ. ಬಹುಪಕ್ಷೀಯತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಅಭಿವೃದ್ಧಿ ಸಹಕಾರ ಕುರಿತು ಜಿ20 ವಿದೇಶಾಂಗ ಸಚಿವರ ಸಭೆಯ ಮೊದಲ ಅಧಿವೇಶನ ಗುರುವಾರ ಆರಂಭವಾಗಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಸಭೆಯಲ್ಲಿ’ ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ಭಾರತದ ಧ್ಯೇಯೋದ್ದೇಶವನ್ನು ಮನವರಿಕೆ ಮಾಡಿಕೊಡಲಾಗುತ್ತದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ದೃಷ್ಟಿಕೋನವನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ.  ಬಹುಪಕ್ಷೀಯತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಅಭಿವೃದ್ಧಿ ಸಹಕಾರ ಸುತ್ತಲಿನ ಸಮಕಾಲೀನ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ಜಿ 20 ವಿದೇಶಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಷ್ಯಾ-ಉಕ್ರೇನ್ ಯುದ್ಧ ಕುರಿತ ಚರ್ಚೆಗಳು ಶೃಂಗಸಭೆಯ ಉಳಿದ ಕಾರ್ಯಸೂಚಿಗಳನ್ನು ಹಳಿತಪ್ಪಿಸಬಾರದು ಎಂದು ಸುಳಿವು ನೀಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror