ನವದೆಹಲಿ : 68 ವರ್ಷದ ನರೇಂದ್ರ ದಾಮೋದರ ದಾಸ್ ಮೋದಿ ಭಾರತದ ಪ್ರಧಾನಮಂತ್ರಿಯಾಗಿ ಎರಡನೇ ಬಾರಿಗೆ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನೀಗ ನಮೋ 2.0 ಸರಕಾರ.
ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. ‘ನವ ಭಾರತ’ ನಿರ್ಮಾಣಕ್ಕೆ ಸಿದ್ಧವಾಗಿರುವ ಮೋದಿ ಅವರು ತಮ್ಮ ಹೊಸ ಸಚಿವ ಸಂಪುಟವನ್ನೂ ಇದೇ ಬಾರಿಗೆ ರಚಿಸಿಕೊಂಡರು. ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 352 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಅದರಲ್ಲೂ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಿತು.
ಪ್ರಮಾಣ ವಚನ ಕಾರ್ಯಕ್ರಮಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು. ಪೇಜಾವರ ಶ್ರೀ, ಮಂತ್ರಾಲಯ ಶ್ರೀ , ಆದಿಚುಂಚನಗಿರಿ ಶ್ರೀಗಳು ಸೇರಿದಂತೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ಗಣ್ಯರು ರಾಜ್ಯದಿಂದ ಭಾಗವಹಿಸಿದ್ದರು.
ಸಚಿವರಾಗಿ ರಾಜನಾಥ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ , ಡಿ.ವಿ.ಸದಾನಂದ ಗೌಡ , ನಿರ್ಮಲಾ ಸೀತಾರಾಮನ್ , ರಾಮ್ ವಿಲಾಸ್ ಪಾಸ್ವಾನ್ , ರವಿ ಶಂಕರ್ ಪ್ರಸಾದ್, ಸೇರಿದಂತೆ ವಿವಿಧ ಸಂಸದರು ಪ್ರಮಾಣವಚನ ಸ್ವೀಕರಿಸಿದರು.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…