ಹವಾಮಾನ ವರದಿ | 21-10-2025 | ಬಂಗಾಳಕೊಲ್ಲಿಯಲ್ಲಿ 2 ಚಂಡಮಾರುತ | ಪ್ರಭಲ ಚಂಡಮಾರುತವಾದೀತೇ..?

October 21, 2025
2:10 PM
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗಿನಂತೆ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯಲ್ಲಿ 2 ಚಂಡಮಾರುತಗಳು 24 ರಂದು ಒಟ್ಟು ಸೇರಿ ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಚಲಿಸುವ ಪಥ ನಿಶ್ಚಿತವಾಗಿಲ್ಲ.

22.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತ ಚಲಿಸುವ ಪಥದ ಮೇಲೆ ಅವಲಂಬಿಸಿ ಮುಂದಿನ 10 ದಿನಗಳವರೆಗೂ ಮಳೆಯ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಚಂಡಮಾರುತ ಚಲಿಸುವ ಪಥದ ನಿಖರತೆಯ ಮೇಲೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಚಂಡಮಾರುತದ ಪರಿಣಾಮದ ಮೇಲೆ ಮುಂದಿನ 10 ದಿನಗಳವರೆಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸೂಚನೆಗಳಿವೆ.

Advertisement

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಚಂಡಮಾರುತದ ಪ್ರಭಾವದ ಮೇಲೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗಿನಂತೆ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯಲ್ಲಿ 2 ಚಂಡಮಾರುತಗಳು 24 ರಂದು ಒಟ್ಟು ಸೇರಿ ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಚಲಿಸುವ ಪಥ ನಿಶ್ಚಿತವಾಗಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಆನೆ ದಾಳಿ | ಅರಣ್ಯ ಸಚಿವರ ಸೂಚನೆ
December 17, 2025
9:44 PM
by: ದ ರೂರಲ್ ಮಿರರ್.ಕಾಂ
2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror