ಜ.30 ರಂದು ಹುತಾತ್ಮರ ದಿನಾಚರಣೆ | ಬೆಳಿಗ್ಗೆ 11 ಗಂಟೆಗೆ ರಾಜ್ಯದೆಲ್ಲೆಡೆ ಎರಡು ನಿಮಿಷಗಳ ಕಾಲ ಮೌನ

January 27, 2023
9:15 PM

ದೇಶದ ಸ್ವಾತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷದ ಜನವರಿ 30 ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ 2023ರ ಜ.30ರ ಮೌನ ಆಚರಣೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ  ಸೂಚನೆಗಳನ್ನು ಪ್ರಕಟಿಸಲಾಗಿದೆ. ಜ. 30ರ ಬೆಳಿಗ್ಗೆ 11 ಗಂಟೆಗೆ ರಾಜ್ಯದಲ್ಲಿಡೆ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಗುತ್ತಿದೆ.

Advertisement

ಎಲ್ಲಿ ಸೈರನ್ ಗಳು ಅಥವಾ ಸೈನಿಕರ ಬಂದೂಕುಗಳು ಲಭ್ಯವಿದೆಯೋ ಅಲ್ಲಿ ಎರಡು ನಿಮಿಷಗಳ ಮೌನ ಆಚರಣೆಯ ಕಾಲವನ್ನು ಪ್ರಾರಂಭ ಮತ್ತು ಮುಕ್ತಾಯಕ್ಕೆ ಸೈರನ್ ಅಥವಾ ಸೈನಿಕರ ಬಂದುಗಳ ಶಬ್ದದ ಮೂಲಕ ಎರಡು ನಿಮಿಷಗಳ ಮೌನ ಆಚರಣೆಗೆ ಬೆಳಗ್ಗೆ 10:58 ರಿಂದ 11 ಗಂಟೆವರೆಗೆ ಸೈರನ್ ಅಥವಾ ಬಂದೂಕು ಶಬ್ದ ಮಾಡಿಸುವುದು ಹಾಗೂ ಎರಡು ನಿಮಿಷಗಳ ಮೌನ ಆಚರಣೆಯ ನಂತರ ಪುನಃ 11.02 ರಿಂದ 11.03 ನಿಮಿಷದವರೆಗೆ ಸೈರನ್ ಅಥವಾ ಬಂದೂಕು ಶಬ್ದವನ್ನು ಮಾಡಿಸುವುದು ಈ ಪದ್ಧತಿಯನ್ನು ಸೈರನ್ ಅಥವಾ ಬಂದೂಕು ಸೌಲ್ಯಭ್ಯವಿರುವ ಕಡೆ ಅಳವಡಿಸಿಕೊಳ್ಳಬೇಕು.

ಸಾಧ್ಯವಾಗುವಂತಹ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಮೌನವನ್ನು ಆಚರಿಸಬೇಕು. ಆದಾಗ್ಯೂ ಇದು ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಆಗುವಂತಿದ್ದರೆ ಮೇಲೆ ತಿಳಿಸಿದಂತೆ ಒಂದೇ ಸ್ಥಳದಲ್ಲಿ ಸೇರಲು ಪುಯತ್ನಸದೇ ಇರಬಹುದು. ಸಂಕೇತ ವ್ಯವಸ್ಥೆ ಇರದಂತಹ ಪ್ರದೇಶದಲ್ಲಿ ಬೆಳಗೆ, 11 ಗಂಟೆಗೆ 2 ನಿಮಿಷಗಳ ಮೌನ ಆಚರಿಸಲು ಸಂಬಂಧಪಟ್ಟವರಿಗೆಲ್ಲ ಸೂಕ್ತ ನಿರ್ದೇಶನವನ್ನು ಕಳುಹಿಸಬೇಕು.  ಹುತಾತ್ಮರ ದಿನಾಚರಣೆಯನ್ನು ತಪ್ಪದೇ ಅಚರಿಸಬೇಕಾಗಿರುವುದರಿಂದ, ಈ ಉದ್ದೇಶಕ್ಕಾಗಿ ಸೂಚಿಸಲಾಗಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರತೆ ಮತ್ತು ಯೋಗ್ಯವಾದ ರೀತಿಯಲ್ಲಿ ಆಚರಿಸಲು ರಾಜ್ಯದ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಈ ದಿನದ ವಿಶೇಷತ್ಯಕ್ಕೆ ಸಂಬಂಧಿಸಿದಂತೆ ಭಾಷಣಗಳನ್ನು ಅದರಲ್ಲೂ ವಿಶೇಷವಾಗಿ ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ ಹೋರಾಟಗಾರರ ಪಾತ್ರವನ್ನು ತಿಳಿಸುವ ಭಾಷಣ/ ಚರ್ಚೆಗಳನ್ನು ಏರ್ಪಡಿಸಬೇಕು. ಈ ಭಾಷಣಗಳ ಮುಖ್ಯಾಂಶಗಳಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯವನ್ನು ಉಳಿಸುವುದು, ಸಂರಕ್ಷಿಸುವುದು ಮತ್ತು ಶ್ರೀಮಂತಗೊಳಿಸುವುದಲ್ಲದೆ, ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸುವುದು ಮತ್ತು ಒಂದೇ ಗುರಿಗಳು ಮತ್ತು ಆದರ್ಶಗಳಿಗೆ ಬದ್ಧರಾಗುವ ಅಂಶಗಳನ್ನೊಳಗೊಂಡಿರಬೇಕು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆಯ ಮೂಲ ಉದ್ದೇಶಗಳು ಇರುವ ಸಾಂಸ್ಕೃತಿಕ ಕಾರ್ಯಕ್ರಮಗಳ / ಡಾಕ್ಯುಮೆಂಟರಿ ಚಿತ್ರ ಪದರ್ಶನಗಳ ಏರ್ಪಾಡುಗಳನ್ನು ರಾಜ್ಯದ ಪ್ರಚಾರ ಘಟಕಗಳು ಮಾಡಬಹುದು. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತಿತರೆ ಸಂಬಂಧಪಟ್ಟ ಅಧಿಕಾರಿಗಳು ಈ ನಿರ್ದೇಶನಗಳನ್ನು ತಕ್ಕುದಾದ ರೀತಿಯಲ್ಲಿ ಅನುಸರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್
ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |
May 7, 2025
6:05 AM
by: ದ ರೂರಲ್ ಮಿರರ್.ಕಾಂ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group