20,000 ರೈತರಿಂದ ನಾಳೆ `ದೆಹಲಿ ಚಲೋ’ಗೆ ಕರೆ | 200 ಕ್ಕೂ ಅಧಿಕ ಸಂಘಟನೆಗಳು ಭಾಗಿ | ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ

February 12, 2024
1:03 PM

ರೈತ(Farmer) ದೇಶದ ಬೆನ್ನೆಲುಬು. ಅನ್ನದಾತ ಚೆನ್ನಾಗಿದ್ದರೆ ದೇಶ(Country) ಸುಭೀಕ್ಷವಾಗಿರಲು ಸಾಧ್ಯ. ಆದರೆ ರೈತರ ಕಷ್ಟ, ಸಂಕಷ್ಟಗಳಿಗೆ ಯಾರೂ ಕಿವಿಗೊಡುವುದಿಲ್ಲ. ಆದರೆ ಕೃಷಿಕರಿಗಿರುವ ಹಕ್ಕನ್ನು ಹೋರಾಟ, ಪ್ರತಿಭಟಿಸಿ(Protest) ಪಡೆದುಕೊಳ್ಳುವ ಸಂದರ್ಭಗಳು ಆಗಾಗ ಬರುತ್ತಲೇ ಇದೆ. ಬೆಳೆಗಳಿಗೆ(Crop) ಕನಿಷ್ಠ ಬೆಂಬಲ ಬೆಲೆ(Minimum support price) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

`ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.

ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ.

 

ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

Ahead of the Feb 13, `Delhi Chalo' march organised by approximately 200 farmers’ unions, Haryana has sealed its borders with Punjab in several places, including Ambala, Jind and Fatehabad districts, with concrete blocks, spikes and barbed wire. Haryana has also imposed Section 144 in 15 districts and has banned any demonstrations or tractor marches. Similarly, Chandigarh has also imposed Section 144 ahead of the farmers’ march.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror