2020ರ ವೇಳೆಗೆ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ…..

September 22, 2019
9:40 AM

ನಾವು ಗುರಿ ತಲಿಪಿಯೇ ಸಿದ್ಧ…. ಸೋಲೆಂಬುದು ನಮಗಿಲ್ಲ, ಮುಂದಕ್ಕೆ ಹಾಕಿರುವ ಗೆಲವು ಮಾತ್ರಾ ನಮ್ಮಲ್ಲಿ…. ಇದು ಭಾರತೀಯರ ವಿಶ್ವಾಸ, ಭಾರತೀಯರ ಧೈರ್ಯ, ಹೆಮ್ಮೆಯ ನುಡಿ. ಇದಕ್ಕೆ ಸಾಕ್ಷಿ ಎಂಬಂತೆ ಚಂದ್ರಯಾನ-2 ಯಶಸ್ಸು ಕಂಡಿದ್ದರೂ ಗುರಿ ತಲಪಲು ಸಾಧ್ಯವಾಗಿಲ್ಲ. ಹೀಗಾಗಿ ಮತ್ತೊಂದು ಚಂದ್ರಯಾನಕ್ಕೆ ಸಿದ್ಧತೆ ನಡೆಯುತ್ತಿದೆ. 2020 ರ ವೇಳೆ ಈ ಯಾನ ನಡೆಯಲಿದೆ.

Advertisement
Advertisement

ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸತತ ಪ್ರಯತ್ನದ ಬಳಿಕವೂ ಸಂಪರ್ಕ ಸಾದ್ಯವಾಗಿಲ್ಲ. ಆದರೆ ಇದರಿಂದ ಧೈರ್ಯ , ವಿಶ್ವಾಸ ಕಳೆದುಕೊಂಡಿಲ್ಲ, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುತ್ತಿದೆ.

Advertisement

ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆರ್ಬಿಟರ್ ನಲ್ಲಿ 8 ಉಪಕರಗಳಿವೆ, ಪ್ರತಿಯೊಂದೂ ಉಪಕರಣಗಳು ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿವೆ. ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇಸ್ರೋ ಉಡಾವಣೆ ಮಾಡಿದ್ದ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು. ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿ.ಮೀ ಅಂತರವಿದ್ದಾಗ ವಿಕ್ರಮ್ ಲ್ಯಾಂಡರ್ ನ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಇಡೀ ಯೋಜನೆ ವಿಫಲವಾಯಿತು ಎಂದು ಪಾಕಿಸ್ತಾನ ಸೇರಿದಂತೆ ಅದರ ಪರ ರಾಷ್ಟ್ರಗಳು ಟೀಕಿಸಿದ್ದವು. ಆದರೆ ಅಮೆರಿಕದ ನಾಸಾ, ರಷ್ಯಾದ ಬಾಹ್ಯಾಕಾಶ ಸಂಸ್ಥೆ, ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆಗಳು ಇಸ್ರೋ ಸಾಧನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿವೆ. ಇದೀಗ ಇಸ್ರೋ ಧೈರ್ಯದಿಂದ ಇನ್ನೊಂದು ಯಾನಕ್ಕೆ ಸಿದ್ಧತೆ ನಡೆಸಿದೆ.

Advertisement

ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯಲು ಕೇವಲ 2.1 ಕಿಮೀ ದೂರವಿದ್ದಾಗ ಅದರ ಸಂಪರ್ಕ ಕಡಿತವಾಗಿತ್ತು. ಹೀಗಾಗಿ ಭಾರತದ ಈ ಮಹತ್ವಾಕಾಂಕ್ಷಿ ಯೋಜವೆ ಸಂಪೂರ್ಣ ಯಶಸ್ವಿಯಾಗಿರಲಿಲ್ಲ. ಆದರೆ ಆರ್ಬಿಟರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಚಂದ್ರನ ಕುರಿತ ಮತ್ತಷ್ಟು ಮಾಹಿತಿಗಳನ್ನು  ಜಗತ್ತಿಗೆ ತಿಳಿಸಲಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror