ಫೆಬ್ರವರಿ 1 ರಂದು 2022 ರ ಬಜೆಟ್ ಮಂಡನೆ |

January 25, 2022
8:42 PM

ಫೆಬ್ರವರಿ 1  ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆ ಆಗಲಿದೆ ಎಂದು  ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಬಜೆಟ್‌ ಮಂಡನೆ ನಡೆಸಲಿದ್ದಾರೆ. ಒಂದು ದಿನ ಮುಂಚಿತವಾಗಿ ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೋವಿಡ್-19  ಮಾರ್ಗಸೂಚಿಗಳ ದೃಷ್ಟಿಯಿಂದ ಲೋಕಸಭೆ ಮತ್ತು ರಾಜ್ಯಸಭೆಯು  ಕಾರ್ಯನಿರ್ವಹಿಸುತ್ತದೆ. ಹೀಗಾಗಿ ಸಮಯದಲ್ಲಿ ಬದಲಾವಣೆ ಇರುವ ಸಾಧ್ಯತೆ ಇದೆ. ಜನವರಿ 31 ಮತ್ತು ಫೆಬ್ರವರಿ 1 ರಂದು, ಎರಡೂ ಸದನಗಳ ಸಮಯವು ಬೆಳಿಗ್ಗೆ 11 ರಿಂದ ಇರುತ್ತದೆ ಎಂದು ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ.

ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಕೋವಿಡ್  ಮಾನದಂಡಗಳೊಂದಿದೆ  ಸಂಸತ್ತಿನ ಎರಡು ಸದನಗಳು ದಿನದ ಪ್ರತ್ಯೇಕ ಸಮಯಗಳಲ್ಲಿ ತಲಾ ಐದು ಗಂಟೆಗಳ ಕಾಲ  ನಡೆಯಲಿದೆ. ಮೊದಲಾರ್ಧದಲ್ಲಿ ರಾಜ್ಯಸಭೆ ಮತ್ತು ದ್ವಿತೀಯಾರ್ಧದಲ್ಲಿ ಲೋಕಸಭೆ. ಲೋಕಸಭೆಯು ಫೆಬ್ರವರಿ 1 ರಂದು ಬೆಳೆಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಗಾಗಿ ಸಭೆ ಸೇರಲಿದ್ದು, ಫೆಬ್ರವರಿ 2 ರಿಂದ ಫೆಬ್ರವರಿ 11 ರವರೆಗೆ ಸಂಜೆ 4 ರಿಂದ ರಾತ್ರಿ 9 ರವರೆಗೆ ಅಧಿವೇಶನ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ
October 27, 2026
7:02 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ಬೆಲೆ ನಿಗದಿ – ರೈತರ ಬೇಡಿಕೆಗಳತ್ತ ಸರ್ಕಾರದ ಗಮನ
October 27, 2026
6:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror