ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.
ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್‍ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…