ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 20 ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು.
ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ದೇಶದ ಹತ್ತು ಕೋಟಿ ರೈತರ ಖಾತೆಗಳಿಗೆ ನೇರವಾಗಿ 21 ಸಾವಿರ ಕೋಟಿ ರೂಪಾಯಿಯನ್ನು ಜಮೆ ಮಾಡಲಾಗಿದೆ ಎಂದು ಹೇಳಿದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 20 ನೇ ಕಂತಿನ ಬಿಡುಗಡೆಯ ಮೂಲಕ ಪ್ರಧಾನಿ ಅವರು, 9 ಕೋಟಿ 10 ಲಕ್ಷ ರೈತರ ಖಾತೆಗಳಿಗೆ ನೇರವಾಗಿ ಒಟ್ಟು 20 ಸಾವಿರದ 500 ಕೋಟಿ ರೂಪಾಯಿ ಜಮೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದರಿಂದ ಪಿಎಂ ಕಿಸಾನ್ ಯೋಜನೆಯಡಿ ಒಟ್ಟು ಬಿಡುಗಡೆಗೊಳಿಸಿದ ಮೊತ್ತ 3 ಲಕ್ಷ 90 ಸಾವಿರ ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸೋಮಣ್ಣ, ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕರ್ನಾಟಕದಲ್ಲಿ ಸುಮಾರು 43 ಲಕ್ಷದ 28 ಸಾವಿರದ 905 ಅರ್ಹ ರೈತರು ಯೋಜನೆಯ ಲಾಭ ಪಡೆದಿದ್ದಾರೆ ಎಂದು ಸಚಿವ ವಿ.ಸೋಮಣ್ಣ ವಿವರಿಸಿದರು.




