ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20 ನೇ ಕಂತಿನ ಹಣ ಬಿಡುಗಡೆ | ರಾಜ್ಯದ 43 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಸಂದಾಯ

August 2, 2025
8:46 PM

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಪ್ರಧಾನಮಂತ್ರಿ ಕಿಸಾನ್  ಸಮ್ಮಾನ್ ಯೋಜನೆಯ 20 ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ  ಬಿಡುಗಡೆ ಮಾಡಿದರು.

ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ದೇಶದ ಹತ್ತು ಕೋಟಿ ರೈತರ ಖಾತೆಗಳಿಗೆ ನೇರವಾಗಿ 21 ಸಾವಿರ ಕೋಟಿ ರೂಪಾಯಿಯನ್ನು ಜಮೆ ಮಾಡಲಾಗಿದೆ ಎಂದು ಹೇಳಿದರು.    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 20 ನೇ ಕಂತಿನ ಬಿಡುಗಡೆಯ ಮೂಲಕ ಪ್ರಧಾನಿ ಅವರು, 9 ಕೋಟಿ 10 ಲಕ್ಷ ರೈತರ ಖಾತೆಗಳಿಗೆ ನೇರವಾಗಿ ಒಟ್ಟು 20 ಸಾವಿರದ 500 ಕೋಟಿ ರೂಪಾಯಿ ಜಮೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದರಿಂದ ಪಿಎಂ ಕಿಸಾನ್ ಯೋಜನೆಯಡಿ ಒಟ್ಟು ಬಿಡುಗಡೆಗೊಳಿಸಿದ ಮೊತ್ತ 3 ಲಕ್ಷ 90 ಸಾವಿರ ರೂಪಾಯಿಗೆ ಏರಿಕೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸೋಮಣ್ಣ, ಕಿಸಾನ್ ಸಮ್ಮಾನ್ ನಿಧಿ  ಯೋಜನೆಯಡಿ ಕರ್ನಾಟಕದಲ್ಲಿ  ಸುಮಾರು 43 ಲಕ್ಷದ 28 ಸಾವಿರದ 905 ಅರ್ಹ ರೈತರು ಯೋಜನೆಯ ಲಾಭ ಪಡೆದಿದ್ದಾರೆ ಎಂದು ಸಚಿವ ವಿ.ಸೋಮಣ್ಣ ವಿವರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror