ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

September 19, 2024
9:17 PM

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ  ವರ್ಗಾಯಿಸಲಾಗಿದೆ ಎಂದು  ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್‌ ಚೌವ್ಹಾಣ್‌ ತಿಳಿಸಿದ್ದಾರೆ.…..ಮುಂದೆ ಓದಿ….

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಎನ್ ಡಿಎ ಸರ್ಕಾರಕ್ಕೆ, 100 ದಿನ ತುಂಬಿದ ಸಂದರ್ಭದಲ್ಲಿ ದೆಹಲಿಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಸರ್ಕಾರ ರೈತರ ಕಲ್ಯಾಣಕ್ಕೆ  ಅನೇಕ  ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಕಿಸಾನ್‌ ಸಮ್ಮಾನ್‌ ನಿಧಿ ಅಲ್ಲದೆ, ಉತ್ಪಾದನಾ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಕಿಸಾನ್‌ ಕ್ರಡಿಟ್‌ ಕಾರ್ಡ್‌‌ಗಳನ್ನು ನೀಡಲಾಗುತ್ತಿದೆ. ಈ ವರೆಗೆ 7 ಕೋಟಿ ರೈತರಿಗೆ ಈ ಕಾರ್ಡ್‌‌ಗಳನ್ನು ವಿತರಿಸಲಾಗಿದ್ದು, ಇವನ್ನು ರಸಗೊಬ್ಬರ ಮತ್ತು ಬಿತ್ತನೆ ಬೀಜ ಖರೀದಿಗೆ ಬಳಸಿಕೊಳ್ಳಬಹುದಾಗಿದೆ ಎಂದರು. 100 ದಿನಗಳಲ್ಲಿ ಕೃಷಿಯಲ್ಲಿ 100 ಹೊಸ ವಿಧಾನಗಳನ್ನು ಅಭಿವೃದ್ಧಿ ಪಡಿಸಲು  ಆಧುನಿಕ, ತಾಂತ್ರಿಕ  ತಜ್ಞರು  ಕಾರ್ಯನಿರ್ವಹಿಸಿದ್ದಾರೆ. ಕೃಷಿ ಉತ್ಪಾದನೆ  ಹೆಚ್ಚಿಸುವುದಕ್ಕೆ ಸರ್ಕಾರ  ಹೆಚ್ಚಿನ ಆದ್ಯತೆ ನೀಡಿದ್ದು, ಇದರಿಂದ  ಉತ್ಪಾದನಾ ವೆಚ್ಚ  ಕಡಿಮೆಯಾಗಲಿದೆ ಎಂದರು.

The Agriculture Minister, Shivraj Singh Chouhan, announced that a total of 21 thousand crore rupees has been successfully transferred directly to the bank accounts of 9 crore 50 lakh farmers under the Kisan Samman Nidhi scheme.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group