Russian President Vladimir Putin and Indian Prime Minister Narendra Modi attend a meeting on the sidelines of the Shanghai Cooperation Organization (SCO) summit in Samarkand, Uzbekistan September 16, 2022. Sputnik/Alexandуr Demyanchuk/Pool via REUTERS.
3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ (Narendra Modi) ರಷ್ಯಾಗೆ (Russia) ಭೇಟಿ ನೀಡಿದ್ದಾರೆ. 22ನೇ ಭಾರತ-ರಷ್ಯಾ ಶೃಂಗಸಭೆಯ (22nd India-Russia Summit) ಹಿನ್ನೆಲೆ ರಷ್ಯಾಗೆ ಬಂದಿಳಿದ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ.
ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ ಸೇವೆಗೆ ಮುಡಿಪಾಗಿಟ್ಟಿದ್ದೀರಿ. ಜನರು ಅದನ್ನು ಅನುಭವಿಸುತ್ತಾರೆ ಎಂದು ರಷ್ಯಾದ ಅಧ್ಯಕ್ಷರು ಪ್ರಧಾನಿಗೆ ತಿಳಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ನೀವು ಹೇಳಿದ್ದು ಸರಿ. ನನಗೆ ಒಂದೇ ಗುರಿ ಇದೆ. ನನ್ನ ದೇಶ, ಭಾರತದ ಜನರು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತಮ್ಮ ದೇಶದ ಸೇನೆಯಲ್ಲಿ ಕೆಲಸ ಮಾಡುವ ಎಲ್ಲಾ ಭಾರತೀಯರನ್ನು ಬಿಡುಗಡೆ ಮಾಡುವಂತೆ ಚರ್ಚಿಸಿದ್ದಾರೆ. ಚರ್ಚೆಯ ಬಳಿಕ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ರಷ್ಯಾ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಮೂರನೇ ಅವಧಿಗೆ ಪ್ರಧಾನಿಯಾದ ಮೋದಿ ಅವರನ್ನು ಪುಟಿನ್ ಅಭಿನಂದಿಸಿದ್ದಾರೆ. ನೀವು ಪ್ರಧಾನಿಯಾಗಿ ಮತ್ತೆ ಆಯ್ಕೆಯಾಗಿರುವುದಕ್ಕೆ ಮೊದಲು ನಿಮ್ಮನ್ನು ಅಭಿನಂದಿಸುತ್ತೇನೆ. ಇದು ಆಕಸ್ಮಿಕವಲ್ಲ ಎಂದು ನಾನು ಭಾವಿಸುತ್ತೇನೆ. ನೀವು ತುಂಬಾ ಶಕ್ತಿಯುತ ವ್ಯಕ್ತಿಯಾಗಿದ್ದೀರಿ. ಭಾರತ ಮತ್ತು ಭಾರತೀಯ ಜನರ ಹಿತಾಸಕ್ತಿಗಳಲ್ಲಿ ಫಲಿತಾಂಶಗಳನ್ನು ಸಾಧಿಸುವುದು ಹೇಗೆ ಎಂದು ನಿಮಗೆ ತಿಳಿದಿದೆ. ಭಾರತವು ಆರ್ಥಿಕತೆಯ ವಿಷಯದಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ. ಬಹುಶಃ ಈಗ ಇದು ಜನಸಂಖ್ಯೆಯ ದೃಷ್ಟಿಯಿಂದ ವಿಶ್ವದ ಅತಿದೊಡ್ಡ ದೇಶವಾಗಿದೆ ಎಂದು ಬಣ್ಣಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಮನೆಯಲ್ಲಿ ಸ್ನೇಹಿತನನ್ನು ಭೇಟಿಯಾಗುವುದು ತುಂಬಾ ಸಂತೋಷವಾಗಿದೆ. ನೀವು ನನ್ನನ್ನು ನಿಮ್ಮ ಮನೆಗೆ ಆಹ್ವಾನಿಸಿದ್ದೀರಿ. ಅಂತಹ ಆಸಕ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…