2.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಚಿಕ್ಕಮಗಳೂರು, ಹೊರನಾಡು, ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ ಹಾಗೂ ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೂ ಸುಳ್ಯ, ಸುಬ್ರಮಣ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಈಗಿನ ಪ್ರಕಾರ ಸಧ್ಯಕ್ಕೆ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಸ್ವಾತಿ ಮಳೆ ಸಾಧ್ಯತೆ ಕಡಿಮೆಯಾದಂತೆ ತೋರುತ್ತಿದೆ.
ಅರಬ್ಬಿ ಸಮುದ್ರದಲ್ಲಿ ಯಮನ್ ಕರಾವಳಿ ಬಳಿ ಉಂಟಾದ ವಾಯುಭಾರ ಕುಸಿತದ ಪರಿಣಾಮವೋ ಏನೋ ಪ. ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತ ನಿರೀಕ್ಷಿತ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ. ಹಾಗಾಗಿ ಕರ್ನಾಟಕದಲ್ಲಿ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಈ ಮುಂದೆ ಕೊಟ್ಟಂತಹ ಮುನ್ಸೂಚನೆಯ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ.
ಹಿಂಗಾರು ಮಳೆಯೂ ದುರ್ಬಲವಾಗುತ್ತಿದೆ.