ಮೈಸೂರು ಜಿಲ್ಲೆ | ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿಂದ 239 ಕೋಟಿ ಆರ್ಥಿಕ ಚಟುವಟಿಕೆ |

October 27, 2024
6:35 AM

ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror