ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ ‘ಮಂತ್ರಿಭಾಗ್ಯ’

May 27, 2023
11:40 AM

 ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆ​ಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?

ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ,  ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.

ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್‌ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror