ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?
ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.
ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…