25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ

October 23, 2025
5:13 PM

ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.

1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು.‌ ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!
January 6, 2026
10:41 PM
by: ರೂರಲ್‌ ಮಿರರ್ ಸುದ್ದಿಜಾಲ
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು
January 6, 2026
10:12 PM
by: ರೂರಲ್‌ ಮಿರರ್ ಸುದ್ದಿಜಾಲ
ಮಾತೃ ವಂದನಾ ಯೋಜನೆ – ಗರ್ಭಿಣಿಯರಿಗೆ 6000 ಜಮೆ
January 6, 2026
10:10 PM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಪ್ರತ್ಯೇಕಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಸಂಸ್ಥೆ
January 6, 2026
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror