ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.
1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…