ಅಯೋಧ್ಯೆಯಲ್ಲಿ(Ayodhya) ರಾಮ ಮಂದಿರ(Ram Mandir) ಮರುಸ್ಥಾಪನೆ ಕೋಟ್ಯಾಂತರ ಭಾರತೀಯರ ಕನಸು. ಆ ಕನಸು ಜನವರಿ 22ಕ್ಕೆ ನನಸುಗೊಂಡಿದೆ. ಮುಂದಿನ ಕನಸು ಜೀವನದಲ್ಲಿ ಒಮ್ಮೆಯಾದರು ಅಯೋಧ್ಯೆಗೆ ಭೇಟಿ ನೀಡಬೇಕು. ರಾಮನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಅನ್ನೋದು. ರಾಮಲಲ್ಲಾನ(Ramlalla) ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು(devotees) ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು 11 ಕೋಟಿ ರೂ. ಕಾಣಿಕೆ(donation) ಸಂಗ್ರಹವಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.
ಇದರೊಂದಿಗೆ 10 ಗಣಕೀಕೃತ ಕೌಂಟರ್‌ಗಳಲ್ಲಿ ಜನರು ದೇಣಿಗೆ ನೀಡುತ್ತಾರೆ. ದೇಣಿಗೆ ಕೌಂಟರ್‌ನಲ್ಲಿ ದೇವಸ್ಥಾನದ ಟ್ರಸ್ಟ್ ನೌಕರರನ್ನು ನೇಮಿಸಲಾಗಿದೆ. ಸಂಜೆ ಕೌಂಟರ್ ಮುಚ್ಚಿದ ನಂತರ ಟ್ರಸ್ಟ್ ಕಚೇರಿಯಲ್ಲಿ ಸ್ವೀಕರಿಸಿದ ಕಾಣಿಕೆ ಮೊತ್ತದ ಲೆಕ್ಕವನ್ನು ಸಲ್ಲಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. 11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಪೆಟ್ಟಿಗೆಗಳಲ್ಲಿ ಕಾಣಿಕೆಗಳನ್ನು ಎಣಿಸುತ್ತದೆ. ದೇಣಿಗೆ ಮೊತ್ತವನ್ನು ಠೇವಣಿ ಇಡುವುದರಿಂದ ಹಿಡಿದು ಎಣಿಸುವವರೆಗೆ ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಮಾಡಲಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಜನವರಿ 22 ರಂದು ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆರವೇರಿತ್ತು. ಈ ಕಾರ್ಯಕ್ರಮಕ್ಕೆ ದೇಶವಿದೇಶಗಳಿಂದ ಸುಮಾರು 7000 ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು.
- ಅಂತರ್ಜಾಲ ಮಾಹಿತಿ
About 25 lakh devotees have visited the temple in the last 11 days after the death of Ramlalla. 11 crores from this. Prakash Gupta, office manager of the temple trust said that the donation has been collected.