ಅಯೊಧ್ಯೆ ಬಾಲ ರಾಮನ ದರ್ಶನ ಪಡೆದವರು ಬರೋಬ್ಬರಿ 25 ಲಕ್ಷ ಮಂದಿ | 11 ಕೋಟಿ ರೂ. ಕಾಣಿಕೆ ಸಂಗ್ರಹ

February 2, 2024
11:43 AM

ಅಯೋಧ್ಯೆಯಲ್ಲಿ(Ayodhya) ರಾಮ ಮಂದಿರ(Ram Mandir) ಮರುಸ್ಥಾಪನೆ ಕೋಟ್ಯಾಂತರ ಭಾರತೀಯರ ಕನಸು. ಆ ಕನಸು ಜನವರಿ 22ಕ್ಕೆ ನನಸುಗೊಂಡಿದೆ. ಮುಂದಿನ ಕನಸು ಜೀವನದಲ್ಲಿ ಒಮ್ಮೆಯಾದರು ಅಯೋಧ್ಯೆಗೆ ಭೇಟಿ ನೀಡಬೇಕು. ರಾಮನನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಅನ್ನೋದು. ರಾಮಲಲ್ಲಾನ(Ramlalla) ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು(devotees) ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು 11 ಕೋಟಿ ರೂ. ಕಾಣಿಕೆ(donation) ಸಂಗ್ರಹವಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂ.ಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಭಕ್ತರು ಹಾಕಿದ್ದಾರೆ. ಚೆಕ್ ಮತ್ತು ಆನ್‍ಲೈನ್ ಮೂಲಕ ಪಡೆದ ಮೊತ್ತ ಸುಮಾರು 3.50 ಕೋಟಿ ರೂ. ಆಗಿದೆ. ದೇಗುಲದ ಗರ್ಭಗುಡಿಯಲ್ಲಿ ದರ್ಶನ ಪಥದ ಬಳಿ ನಾಲ್ಕು ದೊಡ್ಡ ಕಾಣಿಕೆ ಪೆಟ್ಟಿಗೆಗಳನ್ನು ಇಡಲಾಗಿದ್ದು, ಅದರಲ್ಲಿ ಭಕ್ತರು ದೇಣಿಗೆಯನ್ನು ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದರೊಂದಿಗೆ 10 ಗಣಕೀಕೃತ ಕೌಂಟರ್‌ಗಳಲ್ಲಿ ಜನರು ದೇಣಿಗೆ ನೀಡುತ್ತಾರೆ. ದೇಣಿಗೆ ಕೌಂಟರ್‌ನಲ್ಲಿ ದೇವಸ್ಥಾನದ ಟ್ರಸ್ಟ್ ನೌಕರರನ್ನು ನೇಮಿಸಲಾಗಿದೆ. ಸಂಜೆ ಕೌಂಟರ್ ಮುಚ್ಚಿದ ನಂತರ ಟ್ರಸ್ಟ್ ಕಚೇರಿಯಲ್ಲಿ ಸ್ವೀಕರಿಸಿದ ಕಾಣಿಕೆ ಮೊತ್ತದ ಲೆಕ್ಕವನ್ನು ಸಲ್ಲಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. 11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಪೆಟ್ಟಿಗೆಗಳಲ್ಲಿ ಕಾಣಿಕೆಗಳನ್ನು ಎಣಿಸುತ್ತದೆ. ದೇಣಿಗೆ ಮೊತ್ತವನ್ನು ಠೇವಣಿ ಇಡುವುದರಿಂದ ಹಿಡಿದು ಎಣಿಸುವವರೆಗೆ ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಮಾಡಲಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಜನವರಿ 22 ರಂದು ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆರವೇರಿತ್ತು. ಈ ಕಾರ್ಯಕ್ರಮಕ್ಕೆ ದೇಶವಿದೇಶಗಳಿಂದ ಸುಮಾರು 7000 ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು.

  • ಅಂತರ್ಜಾಲ ಮಾಹಿತಿ
About 25 lakh devotees have visited the temple in the last 11 days after the death of Ramlalla. 11 crores from this. Prakash Gupta, office manager of the temple trust said that the donation has been collected.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror